ಕಲಗುರ್ತಿ ಗ್ರಾಮದ ದೇವಾನಂದ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಿ ಸಮಾಜದ ಸಮನ್ವಯ ಸಮಿತಿಯಿಂದ ಸುಮಾರು 45 ದಿನಗಳಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದು, 45 ದಿನಗಳ ನಂತರ ಜಿಲ್ಲಾ ಉಸ್ತುವಾರಿ ಸಚಿವ ಕೊನೆಗೂ ಪ್ರತಿಭಟನಾಕಾರರ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು. ಈ ಸಂದರ್ಭದಲ್ಲಿ ಹಾವೇರಿಯ ಕೋಲಿ ಸಮಾಜದ ಪೀಠಾಧಿಪತಿ ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮಿಜಿ, ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕೂರ್, ಭೀಮಣ್ಣ ಸಾಲಿ, ಪ್ರೇಮಕೋಲಿ, ಅವ್ವಣ್ಣ ಮ್ಯಾಕೆರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Post a Comment