Clickable Image

Friday, November 10, 2023

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ - ಹಲವು ಮುಖಂಡರಿಗೆ ಶಾಕ್ ನೀಡಿದ ಹೈಕಮಾಂಡ್

 ಬೆಂಗಳೂರು: ಬಿಜೆಪಿ ನೂತನ ರಾಜ್ಯ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನ ಆಯ್ಕೆ ಮಾಡಲಾಗಿದೆ, ಶಿಕಾರಿಪುರ ಶಾಸಕ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ, ಪ್ರಭಾವಿ ಯುವ ನಾಯಕ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ ನೇಮಕವನ್ನು ಪ್ರಕಟಿಸಿದ್ದಾರೆ.


ದೀಪಾವಳಿಗೆ ಮುನ್ನವೇ ಬಿಜೆಪಿ ಹೈಕಮಾಂಡ್‌ ರಾಜ್ಯ ಬಿಜೆಪಿ ಮತ್ತು ಬಿಎಸ್‌ವೈ ಕುಟುಂಬಕ್ಕೆ ವಿಶೇಷ ಕೊಡುಗೆಯನ್ನು ನೀಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಿದೆ.



ಇದರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷರು ಯಾರಾಗುತ್ತಾರೆ ಎಂಬ ಬಹುಕಾಲದ ಕಾತರಕ್ಕೆ ತೆರೆ ಬಿದ್ದಿದೆ. ನಳಿನ್‌ ಕುಮಾರ್‌ ಕಟೀಲ್‌ ಅವರು ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷರಾಗಿದ್ದು, ಅವರ ಅಧಿಕಾರಾವಧಿ ಒಂದು ವರ್ಷದ ಹಿಂದೆಯೇ ಮುಕ್ತಾಯವಾಗಿದೆ.


ಇದೀಗ ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಹೈಕಮಾಂಡ್‌ ದೊಡ್ಡದೊಂದು ನಿರ್ಧಾರವವನ್ನು ಮಾಡಿದೆ. ವಿಜಯೇಂದ್ರ ಅವರು ಕೂಡಾ ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾದ ಪಕ್ಷಕ್ಕೆ ಮರುಶಕ್ತಿ ನೀಡಲು ಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆ ಇದೆ

Post a Comment

Whatsapp Button works on Mobile Device only