Clickable Image

Monday, December 18, 2023

ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ.

 ಟ್ರಾಫಿಕ್ ಪೊಲೀಸ್ರು ದಂಡ ಸಂಗ್ರಹಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ.




 ಟ್ರಾಫಿಕ್ ಪೊಲೀಸ್ ರು ದಂಡ ಸಂಗ್ರಹಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ, ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸುವ ಪ್ರಕರಣದಲ್ಲಿ ಪೊಲೀಸರು ತಪಾಸಣೆ ಮಾಡುವುದನ್ನು ವಿಡಿಯೋ ಚಿತ್ರೀಕರಣ ಮಾಡಬೇಕಾಗುತ್ತದೆ ಹಾಗೂ ಸಂಚಾರಿ ಪೊಲೀಸರು ಆರೋಪಿಯಿಂದ ದಂಡದ ಮೊತ್ತ ಫೈನು ಸಂಗ್ರಹಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

 ಕೆ ಆರ್ ಪೇಟೆ ಪಟ್ಟಣದ ಸುಭಾಷ್ ನಗರದ ನಿವಾಸಿ ಕೆ ಟಿ ನಾಗರಾಜು ಸಲ್ಲಿಸಿದ ಅರ್ಜಿ ಪುರಸ್ಕರಿಸಿದ ನ್ಯಾಯ ಮೂರ್ತಿ ಈ ಆದೇಶ ಹೊರಡಿಸಿದ್ದಾರೆ. ಹೆಲ್ಮೆಟ್ ಧರಿಸದೇ ಇರುವುದಕ್ಕೆ ಫೈನ್ ಕಟ್ಟಲು ನಿರಾಕರಿಸಿದ ಮತ್ತು ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪ ಸಂಬಂಧ ತಮ್ಮ ವಿರುದ್ಧದ ದೋಷರೂಪ ಪಟ್ಟಿ ರದ್ದು ಮಾಡುವಂತೆ ಕೋರಿ ಕೆ ಆರ್ ಪೇಟೆ ಪಟ್ಟಣದ ಸುಭಾಷ್ ನಗರದ ನಿವಾಸಿ ಕೆ ಟಿ ನಾಗರಾಜು ಅರ್ಜಿ ಸಲ್ಲಿಸಿದರು. ಹೈಕೋರ್ಟ್ ನೀಡಿದ ತೀರ್ಪು ಉಲ್ಲೇಖಿಸಿದ ನ್ಯಾಯ ಪೀಠ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರ ಕಚೇರಿ ಹೊರಡಿಸುವ ಪ್ರಕಾರ ದಂಡದ ಮೊತ್ತವನ್ನು ನಿರ್ಧರಿಸಲು ನ್ಯಾಯಾಲಯಕ್ಕೆ ಮಾತ್ರ ಅಧಿಕಾರವಿದೆ ಯಾವುದೇ ಪರಿಸ್ಥಿತಿಯಲ್ಲೂ ಸಂಚಾರಿ ಪೊಲೀಸರು ಆರೋಪಿಯಿಂದ ದಂಡ ಸಂಗ್ರಹಿಸಲು ಸಾಧ್ಯವಿಲ್ಲ ವಾಹನ ತಪಾಸಣಾ ಚಟುವಟಿಕೆಯನ್ನು ವಿಡಿಯೋ ಚಿತ್ರೀಕರಣ ಮಾಡಬೇಕು ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆಗೆ ಮುಂದಾದರೆ ವ್ಯಕ್ತಿಯನ್ನು ತಡೆಯಬೇಕು ಎಂದು ನ್ಯಾಯಮೂರ್ತಿ ಸ್ಪಷ್ಟನೆ ನೀಡಿದ್ದಾರೆ. ದಂಡಪಾವತಿಸಿದಿದ್ದರೆ ವಾಹನವನ್ನು ಜಪ್ತಿ ಮಾಡುವ ಅಧಿಕಾರ ಪೊಲೀಸರಿಗೆ ಇಲ್ಲ. ಪ್ರಕರಣದಲ್ಲಿ ಪೊಲೀಸರೇ ಠಾಣೆಯಲ್ಲಿ ಬೈಕ್ ನಿಲ್ಲಿಸಲು ಅರ್ಜಿದಾರರಿಗೆ ಬಲವಂತ ಪಡಿಸಿದ್ದಾರೆ ಕೋರ್ಟ್ ಅನುಮತಿ ಪಡೆಯದೆ ಅರ್ಜಿದಾರರಿಗೆ ಕೊಳ ಹಾಕಿ ಬಂಧಿಸಿದ್ದಾರೆ ಎಂದು ನಟರಾಜ್ ಪರ ವಕೀಲ ಸಿಎನ್ ರಾಜು ವಾದ ಮಂಡಿಸಿದರು.

Post a Comment

Whatsapp Button works on Mobile Device only