Clickable Image

Friday, July 5, 2024

ಬೀದರ್ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ!!

 


ಬೀದರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾ ಶರ್ಮಾ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಹೂ- ಗುಚ್ಚ ನೀಡಿ ಬರಮಾಡಿಕೊಂಡರು.

ಶಿಲ್ಪಾ ಶರ್ಮಾ ಅವರು ಕರ್ನಾಟಕ ಕ್ಯಾಡರ್ 2015 ರ ಐ.ಎ.ಎಸ್ ಬ್ಯಾಚ್ ನ ಅಧಿಕಾರಿಯಾದ ಇವರು ಮೂಲತಃ ಹಿಮಾಚಲ ಪ್ರದೇಶದವರಾಗಿದ್ದಾರೆ.2018 ರಲ್ಲಿ ಇವರು ರಾಯಚೂರು ಜಿಲ್ಲೆಯಲ್ಲಿ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿ ನಂತರ ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕೆಲಸ ನಿರ್ವಹಣೆ ಮಾಡಿರುತ್ತಾರೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರಾಗಿ ಹಾಗೂ ಪಂಚಾಯತ ರಾಜ್ ಇಲಾಖೆಯಲ್ಲಿ ಆಯುಕ್ತರಾಗಿ ಮತ್ತು ಕರ್ನಾಟಕ ವಿದ್ಯುತ್ ಕಾರ್ಖಾನೆ ಬೆಂಗಳೂರಿನಲ್ಲಿ ವ್ಯವಸ್ಥಾಪಕ ನಿರ್ದೆಶಕರಾಗಿಯು ಕರ್ತವ್ಯ ನಿರ್ವಹಿಸಿದ್ದಾರೆ.

ಬೀದರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿ ಶಿಲ್ಪಾ ಶರ್ಮಾ ಅವರು ಇಂದು ಬೀದರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದೆನೆ. ಜಿಲ್ಲೆಯ ಅಭಿವೃದ್ಧಿ ಒತ್ತು ನೀಡಲಾಗುವುದು. ಇದಕ್ಕೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ವಿನಂತಿಸಿದ್ದಾರೆ.Post a Comment

Whatsapp Button works on Mobile Device only