Clickable Image

Sunday, July 7, 2024

ಕಾಳಗಿ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ ವಿಧಿವಶ!😭

 ಕಲಬುರಗಿ :ತೀವ್ರ ಹೃದಯಾಘಾತದಿಂದ ಕಲಬುರಗಿ ಜಿಲ್ಲೆಯ  ಕಾಳಗಿ ತಾಲೂಕಿನ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ. ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.ಶ್ರೀ ಸಿದ್ದರಾಮ ಮಹಾಸ್ವಾಮಿ ನಿನ್ನೆ ರಟಕಲ್ ಗ್ರಾಮದಲ್ಲಿ ವಚನ ಸಂಗಮ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರಟಕಲ್ ಗ್ರಾಮದಲ್ಲಿ ಆಯೋಜನೆ ಮಾಡಲಾಗಿದ್ದ ಅದ್ಧೂರಿ ವಚನ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಶಾಸಕ ಬಿಆರ್ ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಆದರಿಂದು ನಸುಕಿನ ಜಾವ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ.

Post a Comment

Whatsapp Button works on Mobile Device only