ಕಲ್ಬುರ್ಗಿ ನಗರದ ಇಎಸ್ಐ ಆಸ್ಪತ್ರೆಯಲ್ಲಿ ಯುವಕನೂರ್ವ ಕೈಯಲ್ಲಿ ಬೈಬಲ್ ಹಿಡಿದು ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಪ್ರಚೋದಿಸುತ್ತಿದ್ದಾನೆ ಎಂದು ಹಿಂದೂ ಕಾರ್ಯಕರ್ತರು ಗಂಭೀರವಾಗಿ ಆರೋಪಿಸಿದ್ದಾರೆ. ಆಸ್ಪತ್ರೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿರುವ ಈ ಯುವಕನನ್ನ ಹಿಂದೂ ಕಾರ್ಯಕರ್ತರು ಗಮನಿಸಿ ವಿಚಾರಿಸಿದ್ದಾರೆ ತನ್ನ ಕೈಯಲ್ಲಿರುವ ಹಲವು ಪುಸ್ತಕಗಳು ಮತ್ತು ಮ್ಯಾಕ್ಸಿನ್ ಗಳು ಕ್ರೈಸ್ತ ಧರ್ಮಕ್ಕೆ ಸೇರಿದ್ದು ಆತ ಮುಗ್ಧ ರೋಗಿಗಳನ್ನು ಗುರಿಯಾಗಿಸಿಕೊಂಡು ಮತಾಂತರ ಮಾಡಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆತನನ್ನು ಕೂಡಲೇ ನಗರದ ಯೂನಿವರ್ಸಿಟಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಪೊಲೀಸರ ವಶಕ್ಕೆ ಹಿಂದೂ ಕಾರ್ಯಕರ್ತರು ಒಪ್ಪಿಸಿದ್ದಾರೆ, ಆತನನ್ನು ಪೊಲೀಸರು ವಿಚಾರಿಸುತ್ತಿದ್ದು ಕೂಡಲೇ ಆತನ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರೆ.
Post a Comment