Clickable Image

Sunday, October 19, 2025

ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ಆದೇಶ

 ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ಆದೇಶ

ಚಿತ್ತಾಪುರ; ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಇಂದು ಮಧ್ಯಾಹ್ನ 3 ಗಂಟೆಯಿಂದ ಸಾಯಂಕಾಲ 6.30 ರವರೆಗೆ ಆಯೋಜನೆ ಮಾಡಿದ್ದ ಪಥ ಸಂಚಲನ ಕಾರ್ಯಕ್ರಮಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಅನುಮತಿ ನಿರಾಕರಿಸಿ ಶನಿವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.




ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ಆರ್ ಎಸ್ ಎಸ್ ಜಿಲ್ಲಾ ವ್ಯವಸ್ಥಾಪಕ ಪ್ರಹ್ಲಾದ ವಿಶ್ವಕರ್ಮ ಅವರಿಗೆ ಪತ್ರ ಬರೆದಿರುವ ತಹಶೀಲ್ದಾರ್ ಅವರು, ಪಥ ಸಂಚಲನ ನಡೆಸುವ ಭಾನುವಾರ ದಿವಸವೇ ಭೀಮ್ ಆರ್ಮಿ ಮತ್ತು ದಲಿತ ಪ್ಯಾಂಥರ್ ಸಂಘಟನೆಯವರು ಚಿತ್ತಾಪುರ ಪಟ್ಟಣದಲ್ಲಿ ಪಥ ಸಂಚಲನ ನಡೆಸಲು ಅನುಮತಿ ನೀಡುವಂತೆ ಕೋರಿರುತ್ತಾರೆ. ಹೀಗಾಗಿ ಒಂದೇ ಸಮಯದಲ್ಲಿ ಪಥ ಸಂಚಲನಕ್ಕೆ ಎಲ್ಲಾ ಸಂಘಟನೆಗಳು ಅನುಮತಿ ಕೋರಿರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವ ಇದೆ. ಅನುಮತಿ ನೀಡಬಾರದು ಎಂದು ಪೊಲೀಸ್ ಅಧಿಕಾರಿಗಳು ವರದಿ ನೀಡಿದ್ದಾರೆ ಎಂದು ಅವರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಬಹುದು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾ‌ರ್ ಅವರು ಆದೇಶಿಸಿದ್ದಾರೆ.

ಪಥಸಂಚಲನ ನಡೆಸುವ ಉದ್ದೇಶದಿಂದ ಅದ್ದೂರಿ ಸಿದ್ಧತೆ ಮಾಡಿಕೊಂಡಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿನಿಧಿಸುವ ಚಿತ್ತಾಪುರ ಪಟ್ಟಣದಲ್ಲಿ ಭಗವಾಧ್ವಜ, ಬ್ಯಾನ‌ರ್ ಹಾಗೂ ಬಂಟಿಂಗ್ಸ್ ಗಳನ್ನು ಅಳವಡಿಸಿದ್ದರು. ಅಳವಡಿಕೆಗೆ ಸೂಕ್ತ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪುರಸಭೆ ಅಧಿಕಾರಿಗಳು ಶನಿವಾರ ನಸುಕಿನಲ್ಲಿಯೇ ಅವುಗಳನ್ನು ತೆರವುಗೊಳಿಸಿದ್ದರು. ಇದೀಗ ತಹಶೀಲ್ದಾ‌ರ್ ಅವರು ಇಡೀ ಪಂಥ ಸಂಚಲನ ಕಾರ್ಯಕಮಕ್ಕೆ ಅನುಮತಿ ನಿರಾಕರಿಸಿದ್ದಾರೆ.

Post a Comment

Whatsapp Button works on Mobile Device only